Saturday, January 27, 2024

ವೃದ್ಧರಾಗಬೇಡಿ, "ಹಿರಿಯರಾಗಿರಿ'

 ಎರಡರ ನಡುವಿನ ವ್ಯತ್ಯಾಸವನ್ನು ತಿಳಿದುಕೊಳ್ಳಿ ಮತ್ತು ಜೀವನವನ್ನು ಪೂರ್ತಿಯಾಗಿ ಆನಂದಿಸಿ...

ಒಬ್ಬ ವ್ಯಕ್ತಿಯು ವಯಸ್ಸಾದಾಗ ... 

'ವೃದ್ಧ' ಅಲ್ಲ "ಹಿರಿಯ" ನಾಗಬೇಕು.

"ವೃದ್ಧಾಪ್ಯ"...ಇತರ ಜನರನ್ನು ಆಧಾರಕ್ಕಾಗಿ ಹುಡುಕುತ್ತದೆ.

"ಹಿರಿತನ"... ಜನರಿಗೆ ಆಧಾರ ನೀಡುತ್ತದೆ.          

"ವೃದ್ಧಾಪ್ಯ"... ಮರೆ ಮಾಚಲು ಬಯಸುತ್ತದೆ.

"ಹಿರಿತನ"... ಬೆಳಕಿಗೆ ತರಲು ಬಯಸುತ್ತದೆ.

"ವೃದ್ಧಾಪ್ಯ"... ಅಹಂಕಾರಿಯಾಗಿರುತ್ತದೆ.

"ಹಿರಿತನ"...ಅನುಭವಿ, ವಿನಯಶೀಲ ಮತ್ತು  ಸಂಯಮಶೀಲವಾಗಿರುತ್ತದೆ.

"ವೃದ್ಧಾಪ್ಯ"...ಹೊಸ ತಲೆಮಾರಿನ ವಿಚಾರಗಳಲ್ಲಿ ಕೈ ಹಾಕಿ ತಿದ್ದಲು ಹೊರಡುತ್ತದೆ.

"ಹಿರಿತನ"...ಯುವ ಪೀಳಿಗೆಗೆ ಬದಲುತ್ತಿರುವ ಕಾಲಕ್ಕೆ ತಕ್ಕಂತೆ ಬದುಕಲು ಅನುವು ಮಾಡಿ ಕೊಡುತ್ತದೆ.

"ವೃದ್ಧಾಪ್ಯ".. 

ನಮ್ಮ ಕಾಲದಲ್ಲಿ ಹೀಗಿತ್ತು ಎಂದು ಚಿಟ್ಟು ಹಿಡಿಸುತ್ತದೆ.

 "ಹಿರಿತನ"...ಬದಲಾಗುತ್ತಿರುವ ಕಾಲದೊಡನೆ ತನ್ನ ನಂಟು ಬೆಳೆಸುತ್ತದೆ ಮತ್ತು ಅದನ್ನು ತನ್ನದಾಗಿಸಿಕೊಳ್ಳುತ್ತದೆ.

"ವೃದ್ಧಾಪ್ಯ"...ಹೊಸ ಪೀಳಿಗೆಯ ಮೇಲೆ ತನ್ನ ಅಭಿಪ್ರಾಯವನ್ನು ಹೇರುತ್ತದೆ.

"ಹಿರಿತನ"...ಯುವ ಪೀಳಿಗೆಯ ಅಭಿಪ್ರಾಯವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತದೆ.

 "ವೃದ್ಧಾಪ್ಯ"...ಜೀವನದ ಸಂಜೆಯಲ್ಲಿ ಅದರ ಅಂತ್ಯವನ್ನು ಹುಡುಕುತ್ತದೆ.

"ಹಿರಿತನ"...ಜೀವನದ ಸಂಜೆಯಲ್ಲೂ ಹೊಸ ಉದಯವನ್ನು ಕಾಯುತ್ತದೆ ಹಾಗೂ ಯುವಕರ ಸ್ಫೂರ್ತಿಯಿಂದ ಪ್ರೇರಿತವಾಗುತ್ತದೆ.

"ಹಿರಿತನ" ಮತ್ತು "ವೃದ್ಧಾಪ್ಯ" ಗಳ ನಡುವಿನ ವ್ಯತ್ಯಾಸವನ್ನು ಗಂಭೀರತಾಪೂರ್ವಕವಾಗಿ ಅರ್ಥ ಮಾಡಿಕೊಂಡು ಮೂಲಕ ಜೀವನವನ್ನು ಪೂರ್ಣವಾಗಿ ಆನಂದಿಸಲು ಸಮರ್ಥರಾಗಿ.

ವಯಸ್ಸು ಎಷ್ಟೇ ಇರಲಿ.... ಸದಾ ಹೂವಿನಂತೆ ಅರಳಿ...

ಉಲ್ಲಾಸ, ಉತ್ಸಾಹಗಳಿಂದ ಬದುಕಿರಿ... ಮತ್ತು ಇತರರ ಜೀವನಕ್ಕೆ ಸ್ಫೂರ್ತಿಯಾಗಿರಿ.

Wednesday, January 24, 2024

ಮನುಷ್ಯ ಸಂಬಂಧಗಳು ಸಂಕೀರ್ಣವಾಗುತ್ತಿವೆ...!


ನಂಬಿಕೆ ಮೊಳೆಯುವ ಬದಲು ದ್ವೇಷ ಚಿಗುರೊಡೆಯುತ್ತಿದೆ. ಸಂಬಂಧಗಳು ವಿಶ್ವಾಸ ಬಂಧದಲ್ಲಿ ವಿಸ್ತರಿಸುವ ಬದಲು ಕ್ಷೀಣಿಸುತ್ತಿರುವುದಕ್ಕೆ ಮನಸ್ಸಿನೊಳಗೆ ಬಿತ್ತುತ್ತಿರುವ ಅಪನಂಬಿಕೆ ಬಿತ್ತನೆಗಳೇ ಮೂಲ ಕಾರಣ. ಜೊಳ್ಳು ಬಿತ್ತಿ ಒಳ್ಳೆಯ ಫಲ ಹೇಗೆ ಸಿಗುವುದಿಲ್ಲವೋ, ಹಾಗೇ ನಮ್ಮ ಸಂಬಂಧಗಳಿಗೆ ತೋರಿಕೆಯ ಲೇಪ ಹಾಕಿ ಬಿಗಿಯುವುದರಿಂದ ಸಡಿಲವಾಗುತ್ತಿದೆ. ಹಿಂದೆಲ್ಲ ಕೂಡುಕುಟುಂಬಗಳಿದ್ದವು; ನೂರಾರು ಜನ ಒಂದುಗೂಡಿ ಬದುಕು ಕಟ್ಟಿಕೊಳ್ಳುತ್ತಿದ್ದರು. ಇಂಥ ಅವಿಭಕ್ತ ಕುಟುಂಬಗಳು ಸಡಿಲಗೊಂಡಿದ್ದು ಸಹ ಮನೆಯ ಸದಸ್ಯರ ಅಪನಂಬಿಕೆ-ಅಸೂಯಾಪರ ಮನಃಸ್ಥಿತಿಗಳಿಂದ.

ಅವಿಭಕ್ತ ಕುಟುಂಬಗಳು ಕ್ಷೀಣಿಸಿದ ನಂತರ ಮುಂದುವರೆದ ವಿಭಕ್ತ ಕುಟುಂಬಗಳಲ್ಲೂ ಹತ್ತಾರು ಮಂದಿ ಬದುಕುತ್ತಿದ್ದರು. ಈಗಿನ ೨೧ನೇ ಶತಮಾನದ ಹೊತ್ತಿಗೆ ಮೂರ್ನಾಲ್ಕು ಮಂದಿಗೆ ಕುಟುಂಬಗಳು ಸೀಮಿತಗೊಂಡಿವೆ. ಹೀಗಿದ್ದರೂ ಮನೆಯಲ್ಲಿ ಅಪನಂಬಿಕೆ-ಅಸಮಾಧಾನಗಳು ಇಮ್ಮಡಿಸುತ್ತಲೇ ಇವೆ. ಇದರಿಂದ ಸುಮಧುರ ಬಾಂಧವ್ಯಗಳು ಹಾಳಾಗುತ್ತಿವೆ. ಸಂಸಾರವೆಂಬ ಸುಂದರ ವ್ಯವಸ್ಥೆ ಕುರೂಪವಾಗುತ್ತಿವೆ. ದಿನಕಳೆದಂತೆ ಸಾರ ಕಳೆದುಕೊಳ್ಳುತ್ತಿರುವ ಸಂಸಾರವೆಂಬ ಸಾಗರ ಬತ್ತಿದರೆ ಮನುಷ್ಯಕುಲ ನಾಶವಾದಂತೆ ಎಂಬ ಪ್ರಜ್ಞೆ ಯಾರಲ್ಲೂ ಕಾಣದಿರುವುದು ಆತಂಕಕಾರಿಯಾಗಿದೆ.

ಹಿಂದೆಲ್ಲಾ ಮನುಷ್ಯಸಂಬಂಧಗಳ ಮಧ್ಯೆ ಗೋಡೆಗಳೆದ್ದು ಮನೆ-ಮನಗಳನ್ನು ಪ್ರತ್ಯೇಕಿಸುತ್ತಿದ್ದವು. ಈಗ ಮನುಷ್ಯರ ವಾಸ ಊರು-ಕೇರಿಗಳನ್ನು ದಾಟಿ ದೇಶಗಳ ಗಡಿಯಾಚೆ ವಿಸ್ತರಿಸುತ್ತಿರುವುದರಿಂದ ಹತ್ತಾರು ತಲೆಮಾರುಗಳ ವಂಶವೃಕ್ಷಗಳು ಸಂಬಂಧದ ಬೆಸುಗೆ ಕಾಣದೆ ಒಣಗುತ್ತಿವೆ. ತನ್ನ ಮಕ್ಕಳು, ಮೊಮ್ಮಕ್ಕಳು ಬಾಳಿ ಬದುಕಲೆಂದು ಕಡುಕಷ್ಟ ಕಾಲದಲ್ಲಿ ಹೊಟ್ಟೆಬಟ್ಟೆ ಕಟ್ಟಿ ಕಟ್ಟಿದ ಸೂರುಗಳು ಬಾಳುವ ಕುಡಿಗಳಿಲ್ಲದೆ ಸೊರಗಿ ಹೋಗುತ್ತಿವೆ. ಮನೆಗೆ ವಾರಸುದಾರರಿಲ್ಲದೆ ತಮ್ಮ ಕಣ್ಣೆದುರೇ ಪಾಳು ಬೀಳುತ್ತಿರುವ ಮನೆಯನ್ನು ನೋಡಲಾಗದೆ, ನೋಡಿದರೂ ಏನೂ ಮಾಡಲಾಗದೆ ವೃದ್ದಾಶ್ರಮ ಸೇರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅನಾಥಾಶ್ರಮಗಳಿಗಿಂತ ವೃದ್ಧಾಶ್ರಮಗಳು ಹೆಚ್ಚಾಗಿವೆ ಅನ್ನುವ ಮಾತು ಕುಹಕ ಮಾತ್ರವಲ್ಲ, ಈ ಸಮಾಜದ ದುರಂತ ಪರಿಸ್ಥಿತಿಯ ಪ್ರತಿಬಿಂಬವಾಗಿದೆ.

ಸಂಬಂಧಗಳು ಹಾಳಾಗುತ್ತಿರುವುದರ ಹಿಂದೆ ಮನುಷ್ಯರ ಸಲ್ಲದ ದುರಾಸೆಗಳು ಮೂಲ ಕಾರಣವಾಗುತ್ತಿವೆ. ಹಣ ಮತ್ತು ಗುಣದ ನಡುವಿನ ವ್ಯತ್ಯಾಸ ಮತ್ತು ಅದರ ಫಲದ ಅರಿವಿಲ್ಲದ ಜನ, ಸಂಬಂಧಗಳನ್ನು ಬೆಲೆ ಕಟ್ಟಿ ತೂಗಿನೋಡುವ ಅಸಹ್ಯಕರ ಮನೋಭಾವ ಬೆಳೆಸಿಕೊಳ್ಳುತ್ತಿದ್ದಾರೆ. ಇದರಿಂದ ನಿತ್ಯ ಅನಾರೋಗ್ಯಕರ ಪೈಪೋಟಿಯ ವಾತಾವರಣ ಸೃಷ್ಟಿಯಾಗಿದೆ. ಇಂಥ ಕೃತಕ ಜಗತ್ತಿನಲ್ಲಿ ತಮ್ಮ ಮಾನ-ಪ್ರಾಣಗಳನ್ನು ಹಣದ ನೋಟಿನಲ್ಲಿ ಸಿಂಗರಿಸುವ ಪ್ರಯತ್ನ ಅವ್ಯಾಹತವಾಗಿ ಸಾಗುತ್ತಿದೆ. ತಮ್ಮ ಜೀವನದಲ್ಲಿ ಕಳೆದುಕೊಳ್ಳುತ್ತಿರುವುದೇನು, ತಮ್ಮ ಬದುಕಿಗೆ ಅಮೂಲ್ಯವಾದುದೇನು, ಎಂಬ ಸತ್ಯ ತಿಳಿಯದೆ ಪ್ರತಿ ಜೀವಕ್ಕೂ ಅಗತ್ಯವಾದ ಸುಖ-ಶಾಂತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಮನೆ ಒಳಗೂ-ಹೊರಗೂ, ಮನದೊಳಗೂ ಮನದ ಹೊರಗೂ ನೆಮ್ಮದಿ ಕಾಣದೆ ಚಡಪಡಿಸುತ್ತಿರುವ ಮನುಷ್ಯರ ನಡವಳಿಕೆ ವಿನಾಶದ ಮುನ್ಸೂಚನೆ ಅನಿಸುತ್ತೆ. ವಿನಾಶ ಕಾಲಕ್ಕೆ ವಿಪರೀತ ಬುದ್ಧಿ ಬರುತ್ತೆ ಅನ್ನೋ ನಾಣ್ನುಡಿಯಂತೆ ಮನುಷ್ಯ ವಿಪರೀತವಾಗಿ ಯೋಚಿಸುತ್ತಾ ವಿಚಿತ್ರವಾಗಿ ಆಡುತ್ತಿದ್ದಾನೆನಿಸುತ್ತೆ.

ಮನುಷ್ಯರ ಒಟ್ಟಾರೆ ಗುಣಗಳು ಜೀವನ್ಮುಖಿಯಾಗಿ ಹೊಮ್ಮುತ್ತಿಲ್ಲ, ಮೃತ್ಯುಮುಖಿಯಾಗಿ ಕಾಣುತ್ತಿವೆ. ಮನುಷ್ಯ ತನ್ನ ತಾನು ಸುಧಾರಿಸಿಕೊಳ್ಳದೆ, ಸಮಾಜವನ್ನು, ಆಮೂಲಕ ಈ ದೇಶವನ್ನು ಸುಧಾರಿಸಲಾರ. ಒಂದು ದೇಶ ಚೆನ್ನಾಗಿರಬೇಕಾದರೆ, ಆ ದೇಶದ ಜನರೂ ಚೆನ್ನಾಗಿರಬೇಕು. ಹಾಗೇ, ಒಂದು ದೇಹ ಉತ್ತಮವಾಗಿರಬೇಕಾದರೆ ಅದರೊಳಗಿನ ಮನಸ್ಸೂ ಉತ್ತಮವಾಗಿರಬೇಕು. ದೇಶದೊಳಗಿನ ಜನ ಒಳ್ಳೆ ಆಲೋಚನೆ ಮಾಡಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ. ಜನ ಕೆಟ್ಟ ಆಲೋಚನೆಯಲ್ಲಿ ಮುಳುಗಿದರೆ, ದೇಶ ಸಹ ಕೆಟ್ಟದರಲ್ಲಿ ಮುಳುಗಿ ಹೋಗುತ್ತದೆ. ಹಾಗೇ ನಮ್ಮ ದೇಹ ಸಹ ಒಳ್ಳೇ ಚಿಂತನೆ ಮಾಡದಿದ್ದರೆ, ಕೆಟ್ಟು ಹೋಗುತ್ತದೆ. ನಾವು, ನಮ್ಮ ಕುಟುಂಬ ಚೆನ್ನಾಗಿದ್ದರೆ, ಈ ದೇಶ ಚೆನ್ನಾಗಿರುತ್ತದೆ ಎಂಬ ಸತ್ಯ ಅರ್ಥವಾದಾಗ ‘ಸಚ್ಚಿದಾನಂದ’ದ ದರ್ಶನವಾಗುತ್ತದೆ.

Sunday, January 21, 2024

ಮನೆಯಲ್ಲಿ ಶ್ರೀರಾಮನಿಗೆ ಈ ರೀತಿ ಪೂಜೆ ಮಾಡಿ


ಜನವರಿ ೨೨ ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಅಯೋಧ್ಯೆಗೆ ಹೋಗಲು ಸಾಧ್ಯವಾಗದವರು ಮನೆಯಲ್ಲಿ ಶ್ರೀರಾಮನಿಗೆ ಪೂಜೆ ಮಾಡಿ ಆಶರ‍್ವಾದ ಪಡೆಯಬಹುದು.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಹುನಿರೀಕ್ಷಿತ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಮೂಲಕ ಕೋಟಿ ಕೋಟಿ ಭಾರತೀಯರ ಕನಸು ನನಸಾಗಲು ಇನ್ನೊಂದು ದಿನ ಮಾತ್ರ ಬಾಕಿ ಉಳಿದಿವೆ. ರಾಮನ ನಾಮಸ್ಮರಣೆಯಿಂದ ಇಡೀ ದೇಶ ಗಮನ ಸೆಳೆಯುತ್ತಿದೆ. ನಾಳೆ (ಜನವರಿ ೨೨, ಸೋಮವಾರ) ಇತಿಹಾಸದಲ್ಲಿ ಸುರ‍್ಣಾಕ್ಷರಗಳಲ್ಲಿ ಬರೆಯಲ್ಪಡುವ ದಿನ. ಈ ವಿಶೇಷ ದಿನದಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲ ರಾಮನ ರಾಮಲಲ್ಲಾ ಪ್ರತಿಮೆಯ ಪ್ರಾಣ ಪ್ರತಿಷ್ಠೆ ನಡೆಯಲಿದೆ.

ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಇಷ್ಟ ಪಡುತ್ತಾರೆ. ಆದರೆ ಬಹುತೇಕರಿಗೆ ಅದು ಸಾಧ್ಯವಾಗುತ್ತಿಲ್ಲ. ಆದರೆ ನೀವು ಅಯೋಧ್ಯೆಗೆ ಹೋಗದೆ ರಾಮನ ಆಶರ‍್ವಾದವನ್ನು ಪಡೆಯಬಹುದು. ಮನೆಯಲ್ಲಿಯೇ ರಾಮನ ಮರ‍್ತಿಯನ್ನು ಪೂಜಿಸಿದರೆ ಭಗವಂತನ ಕೃಪೆಗೆ ಪಾತ್ರರಾಗಬಹುದು. ಶ್ರೀರಾಮನ ಪೂಜಾ ವಿಧಾನವನ್ನು ತಿಳಿಯಿರಿ.

ಮನೆಯಲ್ಲಿ ಶ್ರೀರಾಮನ ಪೂಜೆ ವಿಧಾನ

ಜನವರಿ ೨೨ ರಂದು ಬೇಗ ಎದ್ದು ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಿ. ನಿಮ್ಮ ಮನೆಯ ದೇವರ ಕೋಣೆಯಲ್ಲಿ ಪೀಠವನ್ನು ಇಟ್ಟು ಅದರ ಮೇಲೆ ಹಳದಿ ಬಟ್ಟೆಯನ್ನು ಹಾಕಿ. ನಂತರ ಅದರ ಮೇಲೆ ಶ್ರೀರಾಮನ ವಿಗ್ರಹವನ್ನು ಇಡಿ. ದೇವರಿಗೆ ಪಂಚಾಮೃತ ಅಭಿಷೇಕ ಮಾಡಬೇಕು. ಪೂಜೆ ಮಾಡುವಾಗ ಪರ‍್ವಾಭಿಮುಖವಾಗಿ ಕುಳಿತುಕೊಳ್ಳಲು ಮರೆಯಬೇಡಿ.

ಧೂಪ ಮತ್ತು ದೀಪವನ್ನು ಬೆಳಗಿಸಿ, ರಾಮನ ಕೃಪೆಗೆ ಪಾತ್ರರಾಗಲು ಹೂವುಗಳನ್ನು ರ‍್ಪಿಸಿ, ನೈವೇದ್ಯ ಸಲ್ಲಿಸಬೇಕು. ಶ್ರೀರಾಮನ ಜೊತೆಗೆ ಆತನ ಪರಮ ಭಕ್ತನಾದ ಆಂಜನೇಯ ಸ್ವಾಮಿಯನ್ನು ಪೂಜಿಸುವುದು ಒಳ್ಳೆಯದು. ಈ ಮಂಗಳಕರ ದಿನದಂದು ರಾಮ ಚರಿತ ಮಾನಸ್, ಶ್ರೀ ರಾಮ ರಕ್ಷಾ ಸ್ತೋತ್ರ ಮತ್ತು ಮಂತ್ರ ಪಠಣಗಳನ್ನು ಮಾಡಬೇಕು. ಅಯೋಧ್ಯೆಗೆ ಹೋಗದಿದ್ದರೂ ಮನೆಯಲ್ಲಿ ರಾಮನ ಮರ‍್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸುವುದರಿಂದ ಅಲ್ಲಿಗೆ ಹೋದಷ್ಟೇ ಪುಣ್ಯ ಸಿಗುತ್ತದೆ.

ನಾಳೆ (ಜನವರಿ ೨೨, ಸೋಮವಾರ) ಅಯೋಧ್ಯೆಯಲ್ಲಿ ನಡೆಯಲಿರುವ ಎಲ್ಲಾ ಪೂಜಾ ಕರ‍್ಯಕ್ರಮಗಳನ್ನು ದೂರರ‍್ಶನ ಚಾನೆಲ್‌ನಲ್ಲಿ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ರವರೆಗೆ ನೇರ ಪ್ರಸಾರ ಮಾಡಲಾಗುತ್ತದೆ. ವಿಧಿ ವಿಧಾನಗಳ ಪೂಜಾ ಕರ‍್ಯಕ್ರಮಗಳು ನಡೆಯಲಿವೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಈಗಾಗಲೇ ವಿಧಿ ವಿಧಾನಗಳು ಆರಂಭವಾಗಿವೆ. ರ‍್ಭ ಗುಡಿಯಲ್ಲಿ ಬಾಲ ರಾಮ ವಿಗ್ರಹವನ್ನು ಇರಿಸಲಾಗಿದ್ದು, ಜನವರಿ ೨೦ ರಂದು ಸರಯು ಪವಿತ್ರ ನದಿ ನೀರಿನಿಂದ ದೇವಾಲಯದ ರ‍್ಭಗುಡಿಯನ್ನು ಸ್ವಚ್ಛಗೊಳಿಸಲಾಗಿದೆ. ಇಂದು (ಜನವರಿ ೨೧, ಭಾನುವಾರ) ಬಾಲ ರಾಮನಿಗೆ ೧೨೫ ಕಲಶಗಳನ್ನಿಟ್ಟು ವಿವಿಧ ಪುಣ್ಯಕ್ಷೇತ್ರಗಳಿಂದ ತಂದ ಪುಣ್ಯಜಲದಿಂದ ಸ್ನಾನ ಮಾಡಲಾಗುತ್ತಿದೆ. ಜನವರಿ ೨೨ರಂದು ಮಧ್ಯಾಹ್ನ ೧೨.೩೦ಕ್ಕೆ ರಾಮಲಲ್ಲಾ ಪ್ರಾಣ ಪ್ರತಿಮೆ ಉದ್ಘಾಟನೆಯಾಗಲಿದೆ.

ಜನವರಿ ೨೨ರ ಮತ್ತೊಂದು ವಿಶೇಷ ದಿನ

ಅಯೋಧ್ಯೆಯಲ್ಲಿ ರಾಮಲಲ್ಲಾ ಮರ‍್ತಿ ಪ್ರತಿಷ್ಠಾಪನಾ ದಿನಕ್ಕೆ ಮತ್ತೊಂದು ಮಹತ್ವವಿದೆ. ಅಂದು ಕರ‍್ಮ ದ್ವಾದಶಿ ಇದೆ. ಕ್ಷೀರಸಾಗರದ ಮಂಥನದ ಸಮಯದಲ್ಲಿ, ಭಗವಾನ್ ವಿಷ್ಣುವು ಕರ‍್ಮಾವತಾರ ರೂಪವನ್ನು ಪಡೆಯುತ್ತಾರೆ. ಆದ್ದರಿಂದ ಕರ‍್ಮ ದ್ವಾದಶಿಯ ದಿನವನ್ನು ಭಗವಾನ್ ವಿಷ್ಣುವಿಗೆ ಸರ‍್ಪಿಸಲಾಗಿದೆ. ವಿಷ್ಣುಸಹಸ್ರ ನಾಮಸ್ಮರಣೆ ಮತ್ತು ಪೂಜೆಯನ್ನು ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬುದು ಭಕ್ತರ ನಂಬಿಕೆ.

Story of Narendra Modi in Ayodhya at 14th Jan 1992

14 ಜನವರಿ 1992ರ ರಾಮಲಲ್ಲಾ


ಪ್ರಿಯ ಓದುಗರೆ, ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಯ ಈ ಸಂದರ್ಭದಲ್ಲಿ ನಾನು ನಿಮ್ಮೊಂದಿಗೆ ಒಂದು ವಿಷಯವನ್ನು ಅಂಚಿಕೊಳ್ಳ ಬಯಸುತ್ತಿದ್ದೇನೆ. ಅದೇನೆಂದರೆ, ೧೪ನೆ ಜನವರಿ ೧೯೯೨ ರಂದು ಅನೇಕ ದಿನ ಪತ್ರಿಕೆಗಳು ಫೋಟೋ ಒಂದನ್ನು ಪ್ರಕಟಿಸಿತ್ತು. ಫೋಟೋದೊಂದಿಗೆ ಪತ್ರಿಕೆಗಳಲ್ಲಿ ಹೀಗೆ ಬರೆಯಲಾಗಿತ್ತು. 

‘ಮುರಳಿ ಮನೋಹರ ಜೋಷಿ ಅವರು ಟೆಂಟ್‌ನ್ಲಲಿ ರಾಮಲಲ್ಲಾ ದರ್ಶನ ಮಾಡುತ್ತಿರುವ ದೃಶ್ಯ’ ಎಂದು. ಈ ವಿಷಯವನ್ನು ಈ ಸಂದರ್ಭದಲ್ಲಿ ಹೇಳಲು ಕಾರಣ ಇದೆ. ಅದೇನೆಂದರೆ. ಆ ಫೋಟೋದಲ್ಲಿ ಮುರಳಿ ಮನೋಹರ ಜೋಷಿ ಅವರೊಂದಿಗೆ ಇನೋರ್ವ ವ್ಯಕ್ತಿ ಇದ್ದರು. ಅವರ ಹೆಸರು ಸಹ ಪತ್ರಿಕೆಗಳಲ್ಲಿ ಪ್ರಕಟವಾಗಿರಲಿಲ್ಲ. ಏಕೆಂದರೆ ಅವರ ಹೆಸರು ಅಷ್ಟು ಪ್ರಸಿದ್ಧವಿರಲಿಲ್ಲ. 

ಆದರೆ ಇಂದು ಅದೇ ವ್ಯಕ್ತಿ ೨೨ರ ಜನವರಿ ೨೦೨೪ರಂದು ಅದೇ ಜಾಗದಲ್ಲಿ ನಿರ್ಮಾಣಗೊಂಡಿರುವ ಅಯೋಧ್ಯೆಯ ರಾಮಮಂದಿರವನ್ನು ಲೋಕಾರ್ಪಣೆ ಮಾಡುವರೆಂದು. 

ಅವರೇ ಸನ್ಮಾನ್ಯ ಶ್ರೀ ನರೇಂದ್ರ ದಾಮೋದರ ದಾಸ್ ಮೋದಿ!